ಬಾಯಿ ಚಪ್ಪರಿಸಿ ತಿನ್ನುವ ಮುಸುಕಿನ ಜೋಳದಲ್ಲಿದೆ ಉತ್ತಮ ಆರೋಗ್ಯ..!!

0
2673

ದೇಹಕೆ ಅಗತ್ಯ ಪೋಷ್ಟಿಕಾಂಶಗಳನ್ನು ಪೂರೈಸುವುದರ ಜೊತೆಗೆ ಇದು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಮುಸುಕಿನ ಜೋಳದ ತರಿಯಲ್ಲಿ ನಾರಿನಂಶ ಅಧಿಕವಾಗಿದೆ. ಇದು ದೇಹಕ್ಕೆ ಪ್ರತಿದಿನ ಅಗತ್ಯವಿರುವ ನಾರಿನಂಶವನ್ನು ಪೂರೈಸುತ್ತದೆ. ಒಂದು ಕಪ್ ಹೋಮಿನಿಯಲ್ಲಿ ೪ ಗ್ರಾಂ ನಷ್ಟು ನಾರಿನಂಶವಿದ್ದು, ಇದು ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಹಾಗು ರಕ್ತ ಸಂಚಾರವನ್ನು ನಿಯಂತ್ರಿಸುತ್ತದೆ, ಜೊತೆಗೆ ಮದುಮೇಹ ಹಾಗು ಕೊಬ್ಬನ್ನು ನಿಯಂತ್ರಿಸುತ್ತದೆ, ಇದರ ಸೇವನೆಯಿಂದ ದೇಹದ ತೂಕವನ್ನು ಕಾಯ್ದುಕೊಳ್ಳಬಹುದು.

ಮುಸುಕಿನ ಜೋಳದ ತರಿಯಲ್ಲಿರುವ ಅಧಿಕ ಪ್ರಮಾಣದ ವಿಟಮಿನ್ ಬಿ, ನಮ್ಮ ದೇಹವನ್ನು ಲವಲವಿಕೆಯಿಂದ ಇರಿಸುತ್ತದೆ. ಹಾಗು ದೇಹದಲ್ಲಿ ಕೆಂಪು ರಕ್ತ ಕಣ ಉತ್ಪತ್ತಿಯಾಗಲು ನೆರವಾಗುತ್ತದೆ, ಪೌಷ್ಟಿಕಾಂಶಗಳ ಕೊರತೆಯಿಂದ ಉಂಟಾಗುವ ರೋಗಗಳನ್ನ ಇದು ತಡೆಯುತ್ತದೆ. ಅಲ್ಲದೇ ಇದರಲ್ಲಿ ಕ್ಯಾಲರಿ ಅಂಶ ಕಡಿಮೆಯಿದೆ ಎನ್ನುವುದು ಅತ್ಯಂತ ಗಮನಾರ್ಹ, ಆದ್ದರಿಂದ ಇದರ ಸೇವನೆಯಿಂದ ದೇಹದ ತೂಕ ಹೆಚ್ಚುತ್ತದೆ, ಎಂಬ ಭಯ ಬೇಡ.

ಇದು ಚರ್ಮದ ಅಲರ್ಜಿ ನಿವಾರಣೆ ಮಾಡಲು ಸಹಾಯ ಮಾಡುತ್ತದೆ. ಅಲರ್ಜಿ, ಸನ್ಬರ್ನ್ ಮೊದಲಾದ ಸಮಸ್ಯೆಗಳು ಕಾಣಿಸಿಕೊಂಡಾಗ ಇದನ್ನು ಪೇಸ್ಟ್ ಮಾಡಿ. ಚರ್ಮಕ್ಕೆ ಹಚ್ಚಿದರೆ ಸಮಸ್ಯೆ ನಿವಾರಣೆಯಾಗುತ್ತದೆ, ಇದರಲ್ಲಿ ಹೆಚ್ಚಿನ ಫೈಬರ್ ಅಂಶ ಇದೇ. ಇದು ಜೀರ್ಣಕ್ರಿಯೆ ಸರಿಯಾಗಿ ಆಗಲು ಸಹಾಯ ಮಾಡುತ್ತದೆ, ಜೊತೆಗೆ ಮಲಬದ್ಧತೆ ಸಮಸ್ಯೆಗಳನ್ನು ಸಹ ನಿವಾರಣೆ ಮಾಡುತ್ತದೆ.

ಗ್ಲುಟೆನ್ ಮುಕ್ತ ಆಹಾರ ಸೇವಿಸುವವರಿಗೆ ಮುಸುಕಿನ ಜೋಳ ಸೂಕ್ತ ಆಯ್ಕೆಯಾಗಿದೆ, ಇದರಲ್ಲಿರುವ ಅಧಿಕ ಪ್ರಮಾಣದ ಕಾರ್ಬೋಹೈಡ್ರೇಟ್ಗಳು ದೇಹಕ್ಕೆ ಶಕ್ತಿ ತುಂಬುತ್ತವೆ, ವಿಟಮಿನ್ ಬಿ೧೨ ಮತ್ತು ಫಾಲಿಕ್ ಆಸಿಡ್ ಕಡಿಮೆ ಆಗುವುದರಿಂದ ಅನಿಮಿಯಾ ಸಮಸ್ಯೆ ಕಾಡುತ್ತದೆ, ಈ ಸಮಯದಲ್ಲಿ ನೀವು ಜೋಳ ಸೇವನೆ ಮಾಡಿದರೆ ಈ ಸಮಸ್ಯೆಗಳು ನಿವಾರಣೆಯಾಗಿತ್ತದೆ. ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚುತ್ತವೆ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here