1) ಮಕ್ಕಳಿಗೆ ಕಿವಿ ಚು’ಚ್ಚುವ ಸಂಪ್ರದಾಯ : ಮಕ್ಕಳಿಗೆ ಕಿವಿ ಚು’ಚ್ಚುವುದು ಭಾರತದಲ್ಲಿ ಅತ್ಯಂತ ಪ್ರಮುಖ ಸಂಪ್ರದಾಯವಾಗಿದೆ. ಭಾರತೀಯ ತತ್ವಶಾಸ್ತ್ರಜ್ಞರು ಮತ್ತು ವೈದ್ಯರು ಸಹ ಈ ಸಂಪ್ರದಾಯಕ್ಕೆ ತಮ್ಮ ಸಹಮತವನ್ನು ವ್ಯಕ್ತಪಡಿಸಿದ್ದಾರೆ. ಏಕೆಂದರೆ ಇದು ಚು’ಚ್ಚಿಸಿಕೊಳ್ಳುವ ವ್ಯಕ್ತಿಯಲ್ಲಿ ಬೌದ್ಧಿಕ ಬೆಳವಣಿಗೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಕಿವಿ ಚು’ಚ್ಚಿಸಿಕೊಳ್ಳುವುದರಿಂದ ಕಿವಿಯ ನಾಳಗಳ ಕಾಯಿಲೆಗಳಿಂದ ಮುಕ್ತವಾಗುವುದರ ಜೊತೆಗೆ ಮಾತನಾಡುವುದರಲ್ಲಿ ಇರುವ ಸಮಸ್ಯೆಗಳು ಸಹ ದೂರವಾಗುತ್ತದೆ.
ಇದನ್ನು ಪಾಶ್ಚಿಮಾತ್ಯ ದೇಶದವರು ಸಹ ಅನುಸರಿಸುತ್ತಿದ್ದಾರೆ. ಅದಕ್ಕಾಗಿಯೇ ಅವರು ತಮ್ಮ ಕಿವಿಗಳಿಗೆ ಫ್ಯಾಶನ್ ಆಗಿ ತೋರುವ ಕಿವಿಯೋಲೆಗಳನ್ನು ಧರಿಸುತ್ತಾರೆ. 2) ಭಾರತೀಯ ಮಹಿಳೆಯರು ಏಕೆ ಬಳೆಗಳನ್ನು ಧರಿಸುತ್ತಾರೆ : ಸಾಮಾನ್ಯವಾಗಿ ಮನುಷ್ಯರಲ್ಲಿ ಮೊಣಕೈ ಭಾಗವು ಅತಿ ಹೆಚ್ಚು ಸಕ್ರಿಯವಾಗಿರುವ ಭಾಗವಾಗಿದೆ. ಇದರ ಜೊತೆಗೆ ಇದೇ ಭಾಗದಲ್ಲಿನ ನಾಡಿಯನ್ನು ಪರೀಕ್ಷಿಸಿಯೇ ಜನರಿಗೆ ಬರುವ ವಿವಿಧ ಕಾಯಿಲೆಗಳನ್ನು ಗುರುತಿಸ ಬಹುದು. ಮಹಿಳೆಯರು ಬಳೆಗಳನ್ನು ತಮ್ಮ ಅಂಗೈಗೆ ಧರಿಸಿ ಕೊಳ್ಳುವುದು ತಿಳಿದ ವಿಚಾರವೇ.
ಇದರಿಂದ ಬಳೆಗಳ ನಿರಂತರ ಘರ್ಷಣೆಯು ಈ ಭಾಗದ ಮೇಲೆ ಆಗುತ್ತಿರುತ್ತದೆ. ಆಗ ಇದು ದೇಹದಲ್ಲಿನ ರಕ್ತ ಪರಿಚಲನೆಯು ಅಧಿಕಗೊಳ್ಳುತ್ತದೆ. ಕೆಲವೊಮ್ಮೆ ನಮ್ಮ ದೇಹದಲ್ಲಿ ಸೃಷ್ಟಿಯಾಗುವ ವಿದ್ಯುತ್ ನಮ್ಮ ತ್ವಚೆಯ ಮೂಲಕ ಹೊರ ಬರುತ್ತದೆ, ಆಗ ಬಳೆಗಳು ಅದನ್ನು ಎಳೆದು ಕೊಂಡು ಪುನಃ ನಮ್ಮ ದೇಹಕ್ಕೆ ರವಾನಿಸುತ್ತವೆ. ಏಕೆಂದರೆ ಬಳೆಗಳು ದುಂಡಗೆ ವೃತ್ತಾಕಾರವಾಗಿ ಇರುವುದರಿಂದ ವಿದ್ಯುತ್ ಇತರ ಕಡೆ ಪ್ರವಾಹಿಸಲು ಸಾಧ್ಯವಾಗದೆ ಮರಳಿ ದೇಹಕ್ಕೆ ರವಾನೆಯಾಗುತ್ತದೆ.
3) ದೇವಾಲಯಗಳಲ್ಲಿ ಘಂಟೆಗಳು ಏಕೆ ಇರುತ್ತವೆ : ಜನರು ದೇವಾಲಯಗಳಿಗೆ ಭೇಟಿ ನೀಡಿದಾಗ ಗರ್ಭಗುಡಿಯನ್ನು ಪ್ರವೇಶಿಸುವ ಮೊದಲು ಘಂಟೆಯನ್ನು ಬಾರಿಸುತ್ತಾರೆ. ಕಾರಣವೇನೆಂದರೆ ಶಾಸ್ತ್ರದ ಪ್ರಕಾರ ಘಂಟೆಯ ಸದ್ದು ಎಲ್ಲಾ ರೀತಿಯ ದುಷ್ಟ ಶಕ್ತಿಗಳಿಂದ ನಮ್ಮನ್ನು ಕಾಪಾಡುತ್ತದಲ್ಲದೆ ಜೊತೆಗೆ ಇದು ದೇವರಿಗೆ ಅಪ್ಯಾಯಮಾನಕರವಾದ ಸದ್ದಾಗಿರುತ್ತದೆ. ವೈಜ್ಞಾನಿಕವಾಗಿ ಇದನ್ನು ವಿವರಿಸ ಬೇಕೆಂದರೆ ಇದು ನಮ್ಮ ಏಕಾಗ್ರತೆಯನ್ನು ದೇವರ ಕ್ರಿಯೆಯಲ್ಲಿ ತಲ್ಲೀನಗೊಳ್ಳುವಂತೆ ಮಾಡುತ್ತದೆ.
ಈ ಘಂಟೆಯನ್ನು ಯಾವ ಪ್ರಕಾರ ಮಾಡಿರುತ್ತಾರೆ ಎಂದರೆ ಇದು ನಮ್ಮ ಬಲ ಮತ್ತು ಎಡ ಮೆದುಳಿನ ನಡುವೆ ಅನ್ಯೋನ್ಯತೆಯನ್ನು ತರಲು ಸಾಧ್ಯವಾಗುತ್ತದೆಯಂತೆ. ನಾವು ಯಾವಾಗ ಘಂಟೆಯನ್ನು ಹೊಡೆಯುತ್ತೇವೆಯೋ, ಆಗ ಅದು ಕನಿಷ್ಟ 7 ಸೆಕೆಂಡ್‍ಗಳ ಕಾಲ ಪ್ರತಿ ಧ್ವನಿಸುತ್ತದೆ. 4) ಗಂಡಸರ ತಲೆಯ ಮೇಲೆ ಶಿಖೆ : ಆಯುರ್ವೇದದ ಆದಿ ತಜ್ಞನಾದ ಸುಶ್ರುತ ಋಷಿಯು ತಲೆಯಲ್ಲಿನ ಅತ್ಯಂತ ಸೂಕ್ಷ್ಮ ಭಾಗವನ್ನು “ಅಧಿಪತಿ ಮರ್ಮ” ಎಂದು ಗುರುತಿಸಿದ್ದನು.
ಇದು ಎಲ್ಲಾ ನರಗಳು ಕೂಡುವ ಭಾಗವಾಗಿದೆ. ಶಿಖೆಯು ಈ ಭಾಗವನ್ನು ರಕ್ಷಿಸುತ್ತದೆ. ಇದು ಮೆದುಳಿನ ಕೆಳಗೆ ಇರುವ ಬ್ರಹ್ಮರಂಧ್ರವನ್ನು ಕಾಪಾಡುತ್ತದೆ. ಇಲ್ಲಿಗೆ ದೇಹದ ಕೆಳಭಾಗದಿಂದ ಬರುವ ಸುಶುಮ್ನಾ ನಾಡಿಯು ಸಂಪರ್ಕಿಸುತ್ತದೆ. ಯೋಗದಲ್ಲಿ ಬ್ರಹ್ಮ ರಂಧ್ರವು ಏಳು ಚಕ್ರಗಳಲ್ಲಿಯೇ ಅತ್ಯಂತ ಶ್ರೇಷ್ಟವಾದ ಚಕ್ರವಾಗಿರುತ್ತದೆ. ಇದು ಸಾವಿರ ದಳಗಳ ಕಮಲಕ್ಕೆ ಸರಿಸಮವೆಂಬ ಭಾವನೆ ಯೋಗಿಗಳಲ್ಲಿ ಇದ್ದು, ಜ್ಞಾನ ಕೇಂದ್ರದಂತೆ ಕೆಲಸ ಮಾಡುತ್ತದೆ. ಶಿಖೆಯು ಈ ಕೇಂದ್ರವನ್ನು ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ಮಾಡುತ್ತದೆ ಮತ್ತು ದೇಹದಲ್ಲಿನ ಓಜಸ್ಸು ಎಂಬ ಶಕ್ತಿಯನ್ನು ಸಂರಕ್ಷಿಸುತ್ತದೆ.
5) ನಾವೇಕೆ ವಿಗ್ರಹಗಳನ್ನು ಪೂಜಿಸುತ್ತೇವೆ : ಹಿಂದೂ ಧರ್ಮವು ಇತರ ಧರ್ಮಗಳಿಗಿಂತ ಹೆಚ್ಚಾಗಿ ಮೂರ್ತಿ ಪೂಜೆಯನ್ನು ಬೆಂಬಲಿಸುತ್ತದೆ. ಇದರಿಂದ ಪೂಜೆಯಲ್ಲಿ ಏಕಾಗ್ರತೆಯು ಅಧಿಕವಾಗುತ್ತದೆ ಎಂದು ಅಧ್ಯಯನಕಾರರು ಸ್ಪಷ್ಟ ಪಡಿಸಿದ್ದಾರೆ. ಮನೋವಿಜ್ಞಾನಿಗಳ ಪ್ರಕಾರ ಮನುಷ್ಯನು ತಾನು ನೋಡುವುದರ ಆಧಾರದ ಮೇಲೆ ಆಲೋಚನೆಗಳನ್ನು ಹೊಂದುತ್ತಾನಂತೆ. ಒಂದು ವೇಳೆ ನಿಮ್ಮ ಮುಂದೆ ಮೂರು ವಸ್ತುಗಳು ಇದ್ದಲ್ಲಿ, ಅದರಲ್ಲಿ ಯಾವ ವಸ್ತುವನ್ನು ನೋಡುತ್ತೀರಿ ಎಂಬುದರ ಮೇಲೆ ನಿಮ್ಮ ಭಾವನೆಗಳು ಬದಲಾಗುತ್ತವೆಯಂತೆ.
ಈ ಕಾರಣವಾಗಿಯೇ ಪ್ರಾಚೀನ ಕಾಲದಲ್ಲಿ ಮೂರ್ತಿ ಪೂಜೆಯು ಆರಂಭಗೊಂಡಿತು. ಯಾವಾಗ ಜನರು ದೇವರನ್ನು ಮೂರ್ತಿಯ ರೂಪದಲ್ಲಿ ನೋಡಲು ಆರಂಭಿಸಿದರೋ, ಆಗಲೇ ಅವರ ಮನಸ್ಸನ್ನು ಏಕ ಚಿತ್ತದಿಂದ ದೇವರ ಮೇಲೆ ನೆಲೆಗೊಳಿಸಲು ಸಾಧ್ಯವಾಗುತ್ತ ಹೋಯಿತು. ಇದರಿಂದ ಅವರ ಧ್ಯಾನಕ್ಕೆ ಯಾವುದೇ ಭಂಗ ಬರುತ್ತಿರಲಿಲ್ಲ ಮತ್ತು ಅವರಲ್ಲಿ ಆಧ್ಯಾತ್ಮಿಕ ಶಕ್ತಿಯು ಹೆಚ್ಚಾಗುತ್ತ ಹೋಗುತ್ತಿತ್ತು.