ಪ್ರಕಾಶ್ ರಾಜ್ ಮೇಲೆ ಎಫ್ ಐಆರ್ ದಾಖಲು..!! ಕಾರಣ ಏನು ಗೊತ್ತಾ..?

0
350

ಬೆಂಗಳೂರು ಕೇಂದ್ರ ಲೋಕಸಭಾ ಸಂಭವನೀಯ ಅಭ್ಯರ್ಥಿಯಾದ ಪ್ರಕಾಶ್ ರಾಜ್ ಹಾಗೂ ಇನ್ನಿತರ ಮೂವರ ಮೇಲೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ : ಮಾರ್ಚ್ 12ರಂದು ನಟರಾದ ಪ್ರವೀಣ್ ಹಾಗೂ ಅಭಿನಾಶ್ ಸಂಜೆ ಸುಮಾರು 4:30 ನಗರದ ಎಂಜಿ ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ವೃತ್ತದ ಬಳಿ ಶಾಂತಿ ಪ್ರತಿಭಟನೆಯನ್ನು ಒಂದು ಗಂಟೆಗಳ ಕಾಲ ಮಾಡಿದರು, ಹಾಗೂ ಈ ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸೇರಿ ಕೆಲ ಲೇಖಕರು ಹಾಗೂ ಕಲಾವಿದರು ಹೋರಾಟಗಾರರು ಪಾಲ್ಗೊಂಡಿದ್ದರು.

ಈ ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಲೋಕಸಭಾ ಚುನಾವಣೆಯ ಕುರಿತು ಮತದಾನದ ಬಗ್ಗೆ ಮಾತನಾಡಿದ್ದಾರೆ, ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ, ಈ ಪ್ರತಿಭಟನೆಯಲ್ಲಿ 25ರಿಂದ 30 ಕ್ಕೂ ಅಧಿಕ ಮಂದಿ ಸೇರಿದ ಪರಿಣಾಮ ಪಾದಚಾರಿಗಳಿಗೆ ಸಂಚರಿಸಲು ತೊಂದರೆ ಆಗಿದೆ, ಈ ರೀತಿ ತೊಂದರೆ ಮಾಡುವುದು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತೆ.

ಇದೇ ಕಾರಣಕ್ಕಾಗಿ ಶಾಂತಿನಗರದ ವಿಧಾನಸಭಾ ಕ್ಷೇತ್ರದ ವಿಪಕ್ಷ ದಳದ ಅಧಿಕಾರಿ ಮೂರ್ತಿಯವರು ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದ್ದರು, ಇದರ ಅನುಸಾರವಾಗಿ ಪ್ರಕಾಶ್ ರಾಜ್ ಹಾಗೂ ಇನ್ನೂ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಬ್ಬನ್ ಪಾರ್ಕ್ ಪೊಲೀಸರು ತಿಳಿಸಿದರು.

ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಮರೆಯದೆ ನಮ್ಮ ಕಾಮೆಂಟ್ ಬಾಕ್ಸಲ್ಲಿ ತಿಳಿಸಿ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here