ಇಂದಿನ ದಿನಮಾನಗಳಲ್ಲಿ ಯಾವುದೇ ಅರೋಗ್ಯ ತೊಂದರೆಗಳು ಕಾಣಿಸಿಕೊಂಡರು ನಾವು ವೈದ್ಯರ ಮೊರೆ ಹೋಗುತ್ತೇವೆ ಆದರೆ ಹಿಂದಿನ ಕಾಲದಲ್ಲಿ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಗಿಡಮೂಲಿಕೆಗಳನ್ನ ಬಳಸಿ ಕಾಲಿಗೆಯನ್ನ ಗುಣಪಡಿಸುತ್ತಿದ್ದರು. ಅಂತಹ ನೈಸರ್ಗಿಕ ಗಿಡಮೂಲಿಕೆಗಳಲ್ಲಿ ದೊಡ್ಡಪತ್ರೆ ಎಳೆಯಿ ಒಂದು.
ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆ ಸಾಧ್ಯ.
ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ.
ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಿಸಿ ಮಾಡಿ ನೆತ್ತಿಯ ಮೇಲೆ ಇಡುತ್ತಾರೆ.
ದೊಡ್ಡ ಪತ್ರೆ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ.
ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ.
ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.
ದೊಡ್ಡಪತ್ರೆ ಎಲೆಯನ್ನು ಒಂದು ಚಿಟಿಕೆ ಉಪ್ಪಿನ ಜೊತೆ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ.
ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.