ಮುಟ್ಟಿದರೆ ಮುನಿ ಗಿಡ ನಿಮ್ಮ ಮನೆಯ ಪಕ್ಕದಲ್ಲಿ ಇದ್ದರೆ ನೀವೇ ಅದೃಷ್ಟವಂತರು ಯಾಕೆ ಗೊತ್ತಾ..?

0
9665

ಒಂದೊಂದು ಸಸ್ಯ ಪ್ರಭೇದಗಳು ಒಂದೊಂದು ರೀತಿಯಲ್ಲಿ ಆರೋಗ್ಯಕರ ಗುಣಗಳನ್ನು ಹೊಂದಿರುತ್ತವೆ, ಆದರೆ ಅದು ಕೆಲವರಿಗೆ ಮಾತ್ರ ಅದರ ಮಹತ್ವ ತಿಳಿದಿರುತ್ತದೆ. ಇಂದು ನಾವು ನಿಮಗೆ ತಿಳಿಸುವ ಈ ಸಸ್ಯವು ಹಲವಾರು ಬೇನೆಗಳ ನಿವಾರಕ ಎನ್ನಲಾಗುತ್ತದೆ.

ಈ ಸಸ್ಯದ ಹಲವಾರು ಆರೋಗ್ಯಕಾರಿ ಗುಣಗಳು ಇಲ್ಲಿವೆ ನೋಡಿ.

ಮುಟ್ಟಿದರೆ ಮುನಿ ಸಸ್ಯದ ಎಲ್ಲಾ ಭಾಗವೂ ಮನೆ ಔಷಧಿ ತಯಾರಿಕೆಗೆ ಬಹಳ ಉಪಯುಕ್ತವಾದುದು. ಗಂಟಲು ಬಾವು ಮತ್ತು ಇತರೆ ಬಾವುಗಳಿಂದ ತೊಂದರೆ ಅನುಭವಿಸುತ್ತಿರುವವರು ಇದರ ಕಾಂಡ, ಎಲೆಯನ್ನು ಚೆನ್ನಾಗಿ ಅರೆದು ಬಾವು ಆಗಿರುವ ಜಾಗದಲ್ಲಿ ಪಟ್ಟು ಹಾಕಬೇಕು.

ಇದರಿಂದ ನೋವು ಮತ್ತು ಬಾವಿನಿಂದಾದ ಊತದ ಉಪಶಮನ ಸಾಧ್ಯವಾಗುತ್ತದೆ. ಎಲೆ ಮತ್ತು ಬೇರುಗಳನ್ನು ಚೆನ್ನಾಗಿ ಅರೆದು ಕುಡಿಸುವುದು ಮಂಡಿನೋವು, ಮಂಡಿ ಊತ, ಮಲಬದ್ಧತೆ, ಮೂತ್ರಪಿಂಡ ಹಾಗೂ ಲಿವರ್‌ನ ತೊಂದರೆಗೆ ಉತ್ತಮ ಔಷಧ.

ಸಾಮಾನ್ಯ ಶೀತ ಆದರೆ ಇದು ಒಳ್ಳೆಯ ಮದ್ದು, ಗಾಯವಾಗಿ ರಕ್ತಸ್ರಾವವಾಗುತ್ತಿದ್ದರೆ ಇದರ ಎಲೆಯನ್ನು ಜಜ್ಜಿ ರಸ ಹಚ್ಚಿದರೆ ರಕ್ತ ಸೋರುವುದು ನಿಲ್ಲುತ್ತದೆ ಹಾಗು ಗಾಯ ಬೇಗನೆ ವಾಸಿಯಾಗುತ್ತದೆ.

ಮೂಲವ್ಯಾಧಿ, ಕಾಲರಾ ಮತ್ತು ಸಾಮಾನ್ಯ ವಾಂತಿಭೇದಿಗೂ ಉತ್ತಮ ಔಷಧಿ, ಚರ್ಮ ವ್ಯಾಧಿಯನ್ನೂ ಕಡಿಮೆ ಮಾಡುತ್ತದೆ, ಕೆಲವೊಂದು ಸ್ತ್ರೀ ರೋಗಕ್ಕೂ ಉತ್ತಮ ಮದ್ದು. ಎಲೆ, ಹೂವು, ಕಾಂಡ ಹಾಗೂ ಬೇರು ಎಲ್ಲವೂ ಔಷಧೀಯ ಗುಣವನ್ನು ಹೊಂದಿದೆ.

ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಮರೆಯದೇ ನಿಮ್ಮ ಸ್ನೇಹಿತರೊಂದಿಗೆ ಹಂಚಿ ಕೊಳ್ಳಿ, ಒಳ್ಳೆಯ ವಿಷಯಗಳನ್ನು ಹಂಚಿಕೊಳ್ಳುವುದು ಸಹ ಒಂದು ಒಳ್ಳೆಯ ವಿಷಯ, ಹಾಗೆಯೇ ಮರೆಯದೆ ನಮ್ಮ ಪೇಜ್ ಅನ್ನು ಲೈಕ್ ಮಾಡಿ ಹೆಚ್ಚಿನ ಅಪ್ಡೇಟ್ ಗಳನ್ನು ಪ್ರತಿದಿನ ಪಡೆಯಿರಿ.

LEAVE A REPLY

Please enter your comment!
Please enter your name here