ಹೆಸರುಕಾಳಿನಲ್ಲಿದೆ ನಿಮ್ಮ ಸೌಂದರ್ಯದ ಗುಟ್ಟು..!!

0
15010

ನಿಮ್ಮ ಮೊಡವೆ ಸಮಸ್ಯೆ, ಡ್ರೈ ಸ್ಕಿನ್ ಸಮಸ್ಯೆ, ಕೂದಲಿನ ಆರೋಗ್ಯ ಹೀಗೆ ಹಲವು ಸಮಸ್ಯೆಗಳಿಗೆ ಹೆಸರು ಕಾಳು ಪರಿಹಾರ ನೀಡಲಿದೆ ಡೆಡ್ ಸ್ಕಿನ್ ತೊಡೆದು ಹಾಕಿ ಚರ್ಮದ ಟೆಕ್ಚರ್ ಹೊಳೆಯುವಂತೆ ಮಾಡುವ ಸಾಮರ್ಥ್ಯ ಹೆಸರುಕಾಳಿಗಿದೆ ಇದ್ರಲ್ಲಿ ವಿಟಮಿನ್ ಎ ಮತ್ತು ಸಿ ಅಂಶ ಹೇರಳವಾಗಿದ್ದು ಚರ್ಮದ ಕಾಂತಿ ಹೆಚ್ಚಿಸುವ ಗುಣ ಹೊಂದಿದೆ.

ಚರ್ಮದ ಹೊಳಪು ಹೆಚ್ಚಿಸಲು ಹೆಸರುಕಾಳು ೫೦ ಗ್ರಾಂನಷ್ಟು ಹೆಸರುಕಾಳಚಿನ್ನು ಒಂದು ರಾತ್ರಿ ನೀರಿನಲ್ಲಿ ಹಾಕಿ ನೆನಸಿಡಿ ಮಾರನೇ ದಿನ ಬೆಳಿಗ್ಗೆ ಅದನ್ನು ಮಿಕ್ಸಿ ಅಥವಾ ಗ್ರೈಂಡರ್ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ ಈ ಪೇಸ್ಟಿಗೆ ಒಂದು ಟೇಬಲ್ ಸ್ಪೂನ್ ಜೇನುತುಪ್ಪ ಮತ್ತು ೧ ಟೇಬಲ್ ಸ್ಪೂನ್ ಬಾದಾಮಿ ಎಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮಿಕ್ಸ್ ಮಾಡಿದ ಕೂಡಲೇ ಮುಖಕ್ಕೆ ಅಪ್ಲೈ ಮಾಡಿ ಸುಮಾರು ಹದಿನೈದು ನಿಮಿಷ ನಂತರ ತಣ್ಣನೆಯ ನೀರಿನಲ್ಲಿ ಮುಖವನ್ನು ತೊಳೆಯಿರಿ.

ತೇವಾಂಶ ಕಳೆದುಕೊಂಡು ಶುಷ್ಕಗೊಳ್ಳುವ ತ್ವಚೆಯುಳ್ಳವರಿಗೆ ಹೆಸರುಕಾಳು ಹೇಳಿ ಮಾಡಿಸಿದ ಒಂದು ಪರಮೌಷಧಿ ಇದರಲ್ಲಿ ವಿಟಮಿನ್ ಮತ್ತು ಎಝೈಮ್ ಅಂಶಗಳು ಚರ್ಮದ ತೇವಾಂಶವನ್ನು ಉಳಿಸುವಲ್ಲಿ ನೆರವಾಗುತ್ತೆ ಎರಡು ಟೇಬಲ್ ಸ್ಪೂನ್ ಆಗುವಷ್ಟು ಹೆಸರುಕಾಳನ್ನು ರಾತ್ರಿಯೇ ಹಾಲಿನಲ್ಲಿ ನೆನಸಿಡಿ. ಮರುದಿನ ಬೆಳಿಗ್ಗೆ ಅದರ ಪೇಸ್ಟ್ ತಯಾರಿಸಿಕೊಳ್ಳಿ ಇದನ್ನು ವಾರಕ್ಕೆ ಮೂರು ಬಾರಿ ಹಚ್ಚುವುದು ಉತ್ತಮ ಮುಖದಲ್ಲಿ ಅನಗತ್ಯವಾಗಿ ಬೆಳೆದಿರುವ ಕೂದಲನ್ನು ತೆಗೆಯಲು ಕೂಡ ಹೆಸರುಕಾಳನ್ನು ಬಳಕೆ ಮಾಡಬಹುದು.

ಸುಮಾರು ನೂರು ಗ್ರಾಂನಷ್ಟು ಹೆಸರುಕಾಳನ್ನು ರಾತ್ರಿಯೇ ನೀರಿನಲ್ಲಿ ನೆನಸಿಟ್ಟು ಬೆಳಿಗ್ಗೆ ಅದನ್ನು ಗ್ರೈಂಡ್ ಮಾಡ್ಕೊಳ್ಳಿ ಈ ಪೇಸ್ಟಿಗೆ ಎರಡು ಟೇಬಲ್ ಸ್ಪೂನ್ ಗಂಧದ ಪುಡಿ ಮತ್ತು ಎರಡು ಟೇಬಲ್ ಸ್ಪೂನ್ ಕಿತ್ತಲೆ ಸಿಪ್ಪಿಯ ಪುಡಿಯನ್ನು ಸೇರಿಸಿ ನಂತರ ಅದಕ್ಕೆ ಕೆಲವು ಹನಿಗಳಷ್ಟು ಅಥವಾ ಪೇಸ್ಟ್ ತಯಾರಿಸಿಕೊಳ್ಳಲು ಸಹಕಾರಿಯಾಗುವಷ್ಟು ಹಾಲನ್ನು ಸೇರಿಸಿ ಮಿಕ್ಸ್ ಮಾಡಿ ಈ ಮಿಶ್ರಣವನ್ನು ಮುಖಕ್ಕೆ ಅಪ್ಲೈ ಮಾಡಿ ವೃತ್ತಾಕಾರದಲ್ಲಿ ಮುಖವನ್ನು ಸ್ಕ್ರಬ್ ಮಾಡ್ಕೊಳ್ಳಿ ಕೆಲವು ನಿಮಿಷಗಳವರೆಗೆ ಸ್ಕ್ರಬ್ ಮಾಡಿದ ನಂತರ ಮುಖವನ್ನು ತಣ್ಣನೆಯ ನೀರಿನಲ್ಲಿ ತೊಳೆಯಿರಿ.

ಹೆಸರುಕಾಳಿನಲ್ಲಿ ಫ್ಯಾಟ್, ಮಿನರಲ್ಸ್, ಮತ್ತು ವಿಟಮಿನ್ ಅಂಶಗಳು ಹೇರಳವಾಗಿರೋದ್ರಿಂದ ಇದು ಕೂದಲು ತುಂಡುತುಂಡಾಗಿ ಉದುರುವುದನ್ನು ನಿಯಂತ್ರಿಸುತ್ತೆ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಗುಣಗಳು ಕೂದಲು ಬುಡಸಮೇತ ಕಿತ್ತು ಬರುವುದನ್ನು ತಡೆಯುತ್ತೆ ಮುಕ್ಕಾಲು ಕಪ್ ನಷ್ಟು ಹೆಸರುಕಾಳನ್ನು ನೀರಿನಲ್ಲಿ ಒಂದು ರಾತ್ರಿ ನೆನಸಿಟ್ಟು ಬೆಳಿಗ್ಗೆ ಪ್ರೆಷರ್ ಕುಕ್ಕರ್ ಬಳಸಿ ಬೇಯಿಸಿ ಬೆಂದ ಮಿಶ್ರಣವನ್ನು ತಣ್ಣಗಾದ ನಂತ್ರ ಪೇಸ್ಟ್ ತಯಾರಿಸಿಕೊಳ್ಳಿ ಕೂದಲು ಉದ್ದು ಇರುವವರು ಇನ್ನೂ ಹೆಚ್ಚು ಹೆಸರುಕಾಳನ್ನು ತೆಗೆದುಕೊಳ್ಳಬಹುದು ತಯಾರಿಸಿಕೊಂಡ ಪೇಸ್ಟಿಗೆ ಒಂದು ಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಮತ್ತು ಒಂದು ಟೇಬಲ್ ಸ್ಪೂನ್ ಆಗುವಷ್ಟು ಲಿಂಬೆಯ ರಸವನ್ನು ಮಿಶ್ರಣ ಮಾಡಿ.

ನಂತರ ಅರ್ದ ಬಟ್ಟಲಿನಷ್ಟು ಮೊಸರನ್ನು ಸೇರಿಸಿ ಎಲ್ಲವನ್ನೂ ಚೆನ್ನಾಗಿ ಕಲಸಿ ಪೇಸ್ಟ್ ತಯಾರಿಸಿಕೊಳ್ಳಿ ಇದನ್ನು ನಿಮ್ಮ ಕೂದಲಿಗೆ ಅಪ್ಲೈ ಮಾಡಿ ಎರಡು ಗಂಟೆ ಕೂದಲಿನಲ್ಲಿ ಈ ಮಿಶ್ರಣವಿರಲಿ ಎರಡುಗಂಟೆಯ ನಂತರ ಮೈಲ್ಡ್ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ ಹೀಗೆ ಹಲವು ಕಾರಣಗಳಿಂದಾಗಿ ಹೆಸರುಕಾಳು ನಿಮ್ಮ ಚರ್ಮ ಮತ್ತು ಕೂದಲಿನ ಸೌಂದರ್ಯವರ್ಧಕವಾಗಿ ಕೆಲಸ ಮಾಡುತ್ತಿದೆ ಎಂದರೆ ತಪ್ಪಗಲಾರದು.

LEAVE A REPLY

Please enter your comment!
Please enter your name here