ನಮ್ಮ ಜೀವನದಲ್ಲಿ ನೋಡಲೇಬೇಕಾದ ಕರ್ನಾಟಕದಲ್ಲಿನ ಶಿವನ ದೇವಾಲಯಗಳು..!!

0
5269

ಶಿವನ ದೇವಾಲಯವಿಲ್ಲದ ರಾಜ್ಯ ಅಥವಾ ದೇಶವೇ ಇಲ್ಲ ಅಂದರೆ ತಪ್ಪಾಗಲಾರದು, ಬಹಳ ಪ್ರಾಚೀನ ಕಾಲದಿಂದಲೂ ಶಿವನ ದೇವಾಲಯ ನೊರ್ಮಿಸಿ ಪೂಜಿಸಿ ಕೊಂಡು ಬರುತ್ತಿರುವ ಇತಿಹಾಸವಿದೆ, ಭಾರತದ ತಾಜ್ ಮಹಲ್ ಶಿವನ ದೇವಾಲಯವೇ ಎಂಬ ವಾದವು ಇದೆ, ಅದರಂತೆ ನಮ್ಮ ಕರ್ನಾಟಕದಲ್ಲಿ ಇರುವ ಹಾಗು ಬಹಳ ಪ್ರಸಿದ್ದಿಯನ್ನು ಪಡೆದಿರುವ ಪರಶಿವನ ದೇವಾಲಯದ ಬಗ್ಗೆ ಇಂದು ತಿಳಿಯೋಣ.

ಶ್ರೀಕ್ಷೇತ್ರ ಧರ್ಮಸ್ಥಳ

ಈ ಕ್ಷೇತ್ರಕ್ಕೆ ಸುಮಾರು ಏಳರಿಂದ ಎಂಟುನೂರು ವರುಷಗಳ ಇತಿಹಾಸವಿದೆ. ಧರ್ಮಸ್ಥಳದ ಹಿಂದಿನ ಹೆಸರು “ಕುಡುಮ” ಎಂಬುದಾಗಿತ್ತು. ಈ ಪ್ರಾಂತ್ಯದ ನೆಲ್ಯಾಡಿ ಬೀಡು ಎಂಬ ಗೃಹದಲ್ಲಿ ಬಿರ್ಮಣ್ಣ ಪೆರ್ಗಡೆ ಮತ್ತು ಅಮ್ಮು ಬಲ್ಲಾಳ್ತಿ ಎಂಬ ಧರ್ಮಿಷ್ಠರಾದ ಸತಿ – ಪತಿ ವಾಸವಾಗಿದ್ದರು.

ಒಮ್ಮೆ ಇವರ ಮನೆಗೆ ನಾಲ್ಕು ಮಂದಿ ಅತಿಥಿಗಳು ಬಂದರು. ಇವರನ್ನು ನೇಮ ನಿಷ್ಠೆಯಿಂದ ಈ ದಂಪತಿಗಳು ಅತಿಥಿ ಸತ್ಕಾರ ಮಾಡಿದರು. ಅದೇ ದಿನ ರಾತ್ರಿ ಆ ನಾಲ್ವರು ಅತಿಥಿಗಳು ಧರ್ಮದೇವತೆಗಳ ರೂಪದಲ್ಲಿ ಬಿರ್ಮಣ್ಣ ಪೆರ್ಗಡೆಯವರ ಕನಸಿನಲ್ಲಿ ಕಾಣಿಸಿಕೊಂಡು, ತಾವೆಲ್ಲರೂ ಆ ಮನೆಯಲ್ಲಿ ನೆಲೆಸಲು ಇಚ್ಚಿಸಿರುವುದಾಗಿ ಹೇಳಿದರು. ಧರ್ಮದೇವತೆಗಳ ಅಣತಿಯಂತೆ ಪೆರ್ಗಡೆಯವರು ತಮ್ಮ ಮನೆ ತೆರವು ಮಾಡಿ ದೇವರುಗಳಿಗೆ ಬಿಟ್ಟು ಕೊಟ್ಟರು.. ಕಾಳರಾಹು-ಪುರುಷ ದೈವ, ಕಳರ್ಕಾಯಿ-ಸ್ತ್ರೀ ದೈವ, ಕುಮಾರಸ್ವಾಮಿ-ಪುರುಷ ದೈವ, ಹಾಗೂ ಕನ್ಯಾಕುಮಾರಿ-ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು.

ಕಾಳರಾಹು – ಪುರುಷ ದೈವ, ಕಾಳರ್ಕಾಯಿ – ಸ್ತ್ರೀ ದೈವ, ಕುಮಾರಸ್ವಾಮಿ – ಪುರುಷ ದೈವ, ಹಾಗೂ ಕನ್ಯಾಕುಮಾರಿ – ಸ್ತ್ರೀ ದೈವ ಆ ಮನೆಯಲ್ಲಿ ನೆಲೆನಿಂತರು. ಆ ದೈವಗಳ ಆಜ್ಞೆಯಂತೆ ಪರ್ಗಡೆಯವರು ಗುಡಿ ಕಟ್ಟಿಸಿ ಬ್ರಾಹ್ಮಣ ಅರ್ಚಕರನ್ನು ನಿತ್ಯ ಪೂಜೆಗೆ ನೇಮಿಸಿದರು.

ಶಿವಯೋಗಿಗಳು ಇಲ್ಲಿ ಈಶ್ವರಲಿಂಗವನ್ನು ಸ್ಥಾಪಿಸುವಂತೆ ಸಲಹೆ ನೀಡಿದರು. ಧರ್ಮದೇವತೆಗಳು ಕೂಡ ಇದನ್ನೇ ಹೇಳಿ ಕದ್ರಿಯಲ್ಲಿರುವ ಮಂಜುನಾಥನ ಲಿಂಗ ತರಲು ತಮ್ಮ ಪ್ರತಿನಿಧಿಯಾಗಿ ಅಣ್ಣಪ್ಪಸ್ವಾಮಿಯನ್ನು ಕಳುಹಿಸಿದರು.ಕುಡುಮಕ್ಕೆ (ಧರ್ಮಸ್ಥಳ)ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.

ಕುಡುಮಕ್ಕೆ (ಧರ್ಮಸ್ಥಳ) ಮಂಜುನಾಥನ ಲಿಂಗ ಬರುವುದರೊಳಗೆ ಅಲ್ಲಿ ಧರ್ಮದೇವತೆಗಳು ದೇವಾಲಯ ನಿರ್ಮಿಸಿದ್ದರು ಎಂಬ ಕಥೆ ಇಲ್ಲಿ ಜನಜನಿತವಾಗಿದೆ.

ವೀರೇಂದ್ರ ಹೆಗ್ಗಡೆ ಅವರು ನಿಜವಾದ ನಮ್ಮ ದಕ್ಷಿಣ ಕನ್ನಡದ ದೇವರು, ಇವರ ಮಟ್ಟಿಗೆ ನಾವು ಮತ್ತೆ ನಮ್ಮ ದಕ್ಷಿಣ ಕನ್ನಡದ ಜನರು ಯಾವತ್ತಿಗೂ ಮಾತು ತಪ್ಪೊಲ್ಲ, ಇವರೇ ನಮ್ಮ ಒಡೆಯರು. ಹೀಗೆಂದು ದಕ್ಷಿಣ ಕನ್ನಡದ ಹಲವು ಮಂದಿ ಹೇಳುತ್ತಿರುತ್ತಾರೆ.

ಕೋಟಿಲಿಂಗೇಶ್ವರ

ಜಗದೀಶ, ಸರ್ವೇಶ, ಮಲ್ಲೇಶ, ಗೌರೀಶ- ಹೀಗೆ ನೂರಾರು ಹೆಸರುಗಳ ಶಿವನನ್ನು ಭಕ್ತರು ಎಲ್ಲೆಲ್ಲಿಯೂ ಕಂಡಿದ್ದಾರೆ. ಕಣ್ಮುಚ್ಚಿ ಧ್ಯಾನಿಸಿದರೆ ಸರ್ವೇಶ ಸಕಲ ಜೀವ ಜಗತ್ತಿನಲ್ಲಿ, ನಿರ್ಜೀವಿಗಳಲ್ಲಿ, ಹಸಿರ ಸಿರಿಯಲ್ಲಿ ಹೀಗೆ ಎಲ್ಲೆಡೆಯೂ ನೆಲೆಸಿದ್ದಾನೆ. ಹಲವು ದಾಸವರೇಣ್ಯರು, ಶಿವಶರಣರು ಶಿವನನ್ನು ಪದಗಳಲ್ಲಿ ಕೊಂಡಾಡಿದ್ದಾರೆ. ಒಂದಕ್ಕಿಂತ ಭಿನ್ನ, ವಿಶೇಷವೆಂಬಂತೆ ಶಿವನನ್ನು ಪೂಜಿಸಲು ದೇವಳಗಳನ್ನು ಸ್ಥಾಪಿಸಿ ಭಕ್ತಿ ಮೆರೆದಿದ್ದಾರೆ. ಇಂಥ ಪುಣ್ಯಕ್ಷೇತ್ರಕ್ಕೆ ಪಾದವಿರಸದಿದ್ದರೆ ಜೀವನ ಪಾವನವಾಗದು ಎಂಬಂಥ ಶ್ರದ್ಧಾ-ಭಕ್ತಿಗಳನ್ನು ಕಟ್ಟಿಕೊಟ್ಟಿರುವ ಕ್ಷೇತ್ರಗಳು ದೇಶ-ವಿದೇಶದಲ್ಲಿ ನೂರಾರಿವೆ.

ಕರ್ನಾಟಕದಲ್ಲೂ ಇಂಥ ವೈಶಿಷ್ಟ್ಯ ತುಂಬಿದ ಕ್ಷೇತ್ರಗಳಲ್ಲಿ ಕೋಲಾರ ಜಿಲ್ಲೆಯ ಕೋಟಿಲಿಂಗ ಕ್ಷೇತ್ರ ಹೆಚ್ಚು ಚಾಲ್ತಿಯಲ್ಲಿದೆ. ರಾಜ್ಯದ ಪ್ರವಾಸೋದ್ಯಮಕ್ಕೆ ಈ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತಿದೆ. ಕೋಲಾರ ಜಿಲ್ಲೆಯ ಚಿನ್ನದಗಣಿ ಸಮೀಪ, ಕಮ್ಮಸಂದ್ರ ಗ್ರಾಮದ ಬಳಿ ವಿಹಂಗಮವಾಗಿರುವ 15 ಎಕರೆ ವಿಸ್ತಾರದ ಈ ಕ್ಷೇತ್ರದಲ್ಲಿ ಕೋಟಿಗಳ ಸಂಖ್ಯೆಯಲ್ಲಿ ಶಿವನ ಸ್ವರೂಪವೆನ್ನಲಾದ ಶಿವಲಿಂಗ ವ್ಯವಸ್ಥಿತವಾಗಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ. ವಿಶ್ವದಲ್ಲೇ ಅತಿ ಎತ್ತರದ ಅಂದರೆ 33 ಮೀಟರ್ ಇರುವ ಶಿವಲಿಂಗ (108 ಅಡಿ) ಹಾಗೂ ನಂದೀಶ್ವರ (35 ಅಡಿ) ಇರುವ ಖ್ಯಾತಿ ಇಲ್ಲಿನದು. ಮಹಾಶಿವರಾತ್ರಿಯಂದು 2 ಲಕ್ಷಕ್ಕೂ ಅಧಿಕ ಸಂಖ್ಯೆಯ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ.

ಮುರುಡೇಶ್ವರ

ಗೋಕರ್ಣದ ಆತ್ಮಲಿಂಗ ಸ್ಥಾಪನೆಯಾದಾಗಲೇ ರಾವಣನಿಂದಲೆ ಇನ್ನು ನಾಲ್ಕು ಲಿಂಗಗಳು ಈ ಜಿಲ್ಲೆಯಲ್ಲಿ ಸ್ಥಾಪಿಸಲ್ಪಟ್ಟವು ಎಂಬುದು ಪುರಾಣದ ಕತೆ. ಇನ್ನಿತರ ನಾಲ್ಕು ಕ್ಷೇತ್ರ ಗಳೆಂದರೆ ಮುರುಡೇಶ್ವರ, ಗುಣವಂತೇಶ್ವರ, ಧಾರೇಶ್ವರ ಮತ್ತು ಸಜ್ಜೇಶ್ವರ. ಮುರ್ಡೇಶ್ವರವು ಕಡಲದಂಡೆಯಲ್ಲಿದ್ದು ಪ್ರಾಚೀನಕಾಲದಿಂದಲೂ ಧಾರ್ಮಿಕತೆ ಹಾಗೂ ಐತಿಹಾಸಿಕ ತೆಗಳ ಪ್ರಸಿದ್ಧ ತಾಣವಾಗಿತ್ತು.

ಅಂತೆಯೆ ಇಂದಿಗೂ ಅಲ್ಲಿ ಹಾಡುವಳ್ಳಿಯ ಸಾಳ್ವ ದೊರೆಗಳು ನಿರ್ಮಿಸಿದ ಬಸದಿ, ತೀರ್ಥಂಕರರ ಮೂರ್ತಿಗಳು, ಹಲವು ದೇವಾಲಯಗಳು, ಕೆರೆ, ವೀರರ ಮನೆ, ವೀರಗಲ್ಲು ಗಳು, ಮರದಿಂದ ತಯಾರಿಸಿದ ೧೬ ಮಾಸತಿಯರ ಕುರುಹುಗಳು, ಇವೆಲ್ಲಕ್ಕೂ ಕಿರೀಟವಿಟ್ಟಂತೆ ಸುಂದರ ನೆಲೆಯಲ್ಲಿ ಶೋಭಿಸುತ್ತಿರುವ ಮುರುಡೇಶ್ವರ ದೇವಾಲಯ ಹಾಗೂ ಹಳೆಯ ದೇವಾಲಯಗಳ ಅವಶೇಷಗಳನ್ನೆಲ್ಲ ಕಾಣಬಹುದು.

ಗೋಕರ್ಣ ಆತ್ಮಲಿಂಗ ಮಹಾಬಲೇಶ್ವರ

ಸಮುದ್ರ ತಟದಲ್ಲಿರುವ ಗೋಕರ್ಣದ ಮಹಾಬಲೇಶ್ವರ ಶಿವನ ದೇವಾಲಯವು ದೇಶದ ಎಲ್ಲ ಹಿಂದೂ ಭಕ್ತರಿಗೆ ಪುಣ್ಯ ಸ್ಥಳ. ಕಾಶಿ, ರಾಮೇಶ್ವರ ಹಾಗೂ ಗೋಕರ್ಣ ತ್ರಿಸ್ಥಲ ಶೈವಕ್ಷೇತ್ರಗಳೆಂದೇ ಖ್ಯಾತವಾಗಿವೆ. ಗೋಕರ್ಣದಲ್ಲಿನ ಮಹಾಬಲೇಶ್ವರ ದೇವಾಲಯದಲ್ಲಿರುವ ಶಿವಲಿಂಗವನ್ನು ರಾವಣನು ಇಲ್ಲಿಗೆ ತಂದನೆಂಬುದು ನಂಬಿಕೆ. ಆತನಲ್ಲಿ ವಿಶೇಷ ಶಕ್ತಿಯನ್ನು ತುಂಬುವುದಲ್ಲದೆ ಆತನನ್ನು ಅತ್ಯಂತ ಬಲಿಷ್ಠವಾಗಿಸಬಲ್ಲ ಲಿಂಗವಾದ ಆತ್ಮಲಿಂಗವನ್ನು ಆತ ಪಡೆದು ತಂದಿದ್ದನು.

ಈಗಾಗಲೇ ದುಷ್ಟನಾಗಿದ್ದ ರಾಜನು ಮತ್ತಷ್ಟು ಬಲಿಷ್ಠನಾಗಬಾರದೆಂಬ ಕಾರಣದಿಂದ ದೇವತೆಗಳು ಗಣೇಶನ ಸಹಕಾರದೊಂದಿಗೆ ಆತ ಲಿಂಗವನ್ನು ಇಲ್ಲಿಯೇ ಬಿಡುವಂತೆ ತಂತ್ರ ಹೂಡಿದರು. ಮುಂದೆ ಮಹಾ ಬಲಶಾಲಿಯಾದ ರಾವಣನೇ ಬಲ ಬಿಟ್ಟು ಎಳೆದರೂ ಬಾರದೆ ಗಟ್ಟಿಯಾಗಿ ಭೂಮಿಯನ್ನು ಹಿಡಿದ ಶಿವ ಈ ಪವಿತ್ರ ಪುಣ್ಯಕ್ಷೇತ್ರದಲ್ಲಿ ಮಹಾಬಲೇಶ್ವರ ಎಂಬ ಹೆಸರಿನಿಂದ ಲಿಂಗರೂಪಿಯಾಗಿ ನೆಲೆಸಿದ ಎಂಬ ಪ್ರತೀತಿ ಇದೆ. ತಮಿಳು ಕವಿಗಳಾದ ಅಪ್ಪಾರ್ ಮತ್ತು ಸಂಬಂದಾರ್ ರವರ ರಚನೆ ಕೀರ್ತನೆಗಳಲ್ಲಿ ಉಲ್ಲೇಖಗೊಂಡಿದ್ದು, ತುಳು ನಾಡಿನ ಒಡೆಯನ ಹೊಗಳಿಕೆಗೆ ಸಾಕ್ಷಿಯಾಗಿವೆ. ಈ ಸ್ಥಳವು ಮೂಲವಾಗಿ ವಿಜಯನಗರ ಅರಸರಾದ ಕದಂಬರ ಆಳ್ವಿಕೆಯಲ್ಲಿತ್ತು.

ನಂಜನಗೂಡು ನಂಜುಂಡೇಶ್ವರ

ದಕ್ಷಿಣ ಭಾರತದ ದೊಡ್ಡ ದೇವಾಲಯಗಳಲ್ಲಿ ನಂಜನಗೂಡು ನಂಜುಂಡೇಶ್ವರ ದೇವಾಲಯವೂ ಒಂದಾಗಿದೆ. ಕಪಿಲಾ ನದಿಯ ದಂಡೆಯಲ್ಲಿ ಈ ದೇವಾಲಯವಿದೆ. 11ನೇ ಶತಮಾನದಲ್ಲಿ ಚೋಳರಿಂದ ಈ ದೇವಾಲಯ ವಿಸ್ತರಣೆಗೊಂಡಿತೆಂದು ಹೇಳಲಾಗಿದೆ. ಸುಮಾರು 385 ಅಡಿ ಉದ್ದ, 160 ಅಡಿ ಅಗಲದ ಈ ದೇವಾಲಯದಲ್ಲಿ 140ಕ್ಕೂ ಹೆಚ್ಚು ಕಂಬಗಳ ಸಂಕೀರ್ಣವಿದೆ.

ಮಮ್ಮುಡಿ ಕೃಷ್ಣರಾಜ ಒಡೆಯರ್ ಅವರು 1845ರಲ್ಲಿ ನಂಜನಗೂಡು ನಂಜುಂಡೇಶ್ವರ ದೇವಾಲಯಕ್ಕೆ ಗೋಪುರ ನಿರ್ಮಿಸಿದರು. ಇಲ್ಲಿ ನಡೆಯುವ ರಥೋತ್ಸವಕ್ಕೆ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಭೇಟಿ ಕೊಡುತ್ತಾರೆ. ವೈಭವದಿಂದ ನಡೆಯುವ ತೆಪ್ಪೋತ್ಸವವನ್ನು ಜನ ಕಣ್ತುಂಬಿಕೊಳ್ಳುತ್ತಾರೆ.

LEAVE A REPLY

Please enter your comment!
Please enter your name here