ಈಗಾಗಲೇ ಇನ್ಫೋಸಿಸ್ ಫೌಂಡೇಶನ್ ಕರುನಾ ಸೋಂಕಿತರಿಗೆ ಪ್ರತ್ಯೇಕವಾಗಿ ವಾರ್ಡ್ ನಿರ್ಮಿಸಿಕೊಡುವ ಘೋಷಣೆಯನ್ನು ಮಾಡಲಾಗಿತ್ತು, ಇದೀಗ ಮತ್ತೊಮ್ಮೆ ಜನರ ಸಹಾಯಕ್ಕೆ ಬಂದ ಇನ್ಫೋಸಿಸ್ ಫೌಂಡೇಶನ್ 100 ಕೋಟಿ ಹಣ ದೇಣಿಗೆ ನೀಡುವುದಾಗಿ ಪ್ರಕಟನೆ ಮಾಡಿದೆ, ಈ ಬಗ್ಗೆ ಪತ್ರಿಕೆಗಳಲ್ಲಿ ಕುತ್ತು ಪ್ರಕಟನೆ ಮಾಡಿಸಿರುವ ಇನ್ಫೋಸಿಸ್ ಫೌಂಡೇಶನ್ ಒಟ್ಟು 100 ಕೋಟಿ ಹಣವನ್ನು ದೇಣಿಗೆ ರೂಪದಲ್ಲಿ ಬಿಡುಗಡೆ ಮಾಡಲಿದ್ದು, ಅದರಲ್ಲಿ 50 ಕೋಟಿ ಹಣವನ್ನು ಪಿಎಂ ಕೇರ್ಸ್ ನಿಧಿಗೆ ವರ್ಗ ಮಾಡುತ್ತಾರಂತೆ, ಇನ್ನುಳಿದ 50 ಕೋಟಿಯನ್ನು ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆಗಳ ಸಾಮರ್ಥ್ಯ ವಿಸ್ತರಣೆಗೆ ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ ವೆಂಟಿಲೇಟರ್, ಪರೀಕ್ಷಾ ಕಿಟ್ ಹಾಗೂ ಪರ್ಸನಲ್ ಪ್ರೋಆ್ಯಕ್ಟಿವ್ ಇಕ್ವಿಪ್‍ಮೆಂಟ್(ಪಿಪಿಇ)ಗಳಾದ ಮಾಸ್ಕ್ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಆರೋಗ್ಯ ರಕ್ಷಣೆ ಸಿಬ್ಬಂದಿಗೆ ನೀಡಲು ಮುಂದಾಗಿದೆ.
ಅಷ್ಟೇ ಅಲ್ಲದೆ ದುರ್ಬಲ ವರ್ಗದವರಿಗೆ ಆಹಾರ ಮತ್ತು ಪೌಷ್ಠಿಕಾಂಶ ಲಭ್ಯವಾಗುವಂತೆ ಮಾಡಲು ಇದನ್ನು ಬಳಸಿಕೊಳ್ಳಲಾಗುತ್ತದೆ. ಬೆಂಗಳೂರಿನಲ್ಲಿ ಕೊರೊನಾ ವೈರಸ್‍ಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆಗೆ ನೆರವು ನೀಡುವುದಾಗಿ ಘೋಷಿಸಿತ್ತು. ಅಲ್ಲದೆ ದೇಶದ ಮಿಲಿಟರಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಮತ್ತು ಪಿಪಿಇ ಸಲಕರಣೆ ನೀಡುವುದಾಗಿ ಘೋಷಿಸಿದೆ.
ಈ ಕುರಿತು ಮಾತನಾಡಿರುವ ಸುಧಾಮೂರ್ತಿ ಅಗತ್ಯವಿರುವ ಎಲ್ಲರಿಗೂ ಪರಿಹಾರ ಸಾಮಗ್ರಿಗಳು ತಲುಪುವಂತೆ ಮಾಡುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಚಿಕಿತ್ಸೆಗೆ ಹಣ ಭರಿಸಲು ಸಾಧ್ಯವಾಗದ ರೋಗಿಗೆ ನಮ್ಮ ಆರೋಗ್ಯ ರಕ್ಷಣೆ ಸಿಬ್ಬಂದಿ ನೆರವಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.